Site icon PowerTV

ಬಿಎಸ್​ವೈ ಕಡೆಗಣಿಸಿದ್ದು ಬಿಜೆಪಿಗೆ ಶಾಪವಾಗಿದೆ : ರೇಣುಕಾಚಾರ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್ ಯಡಿಯೂರಪ್ಪ ಅವರಂಥ ನಾಯಕರನ್ನು ಕಡೆಗಣಿಸಿದ್ದಾರೆ. ಇದು ಬಿಜೆಪಿಗೆ ಶಾಪವಾಗಿದೆ ಎಂದು ಮತ್ತೆ ಸ್ವಪಕ್ಷದವರ ಮೇಲೆಯೇ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಗುಡುಗಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವರ್ಚಸ್ಸು ಇರೋವವರನ್ನು ಬೆಳೆಯೋಕೆ ಬಿಡ್ತಿಲ್ಲ. ಬಿಎಸ್​ವೈ ಪುತ್ರ ಬಿ.ವೈ ವಿಜಯೇಂದ್ರ ಅಂಥವರನ್ನು ಮೂಲೆಗುಂಪು ಮಾಡ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗೆ ಗೈರು ವಿಚಾರವಾಗಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ನಾನು ಹೋಗಿಲ್ಲ. ಆ ನೋಟಿಸ್ ವಾಪಸ್ ಪಡೆಯಬೇಕು, ಅದಕ್ಕೆ ಸಭೆಗೆ ಹಾಜರಾಗ್ತಿಲ್ಲ. ನಾನು ನೇರವಾಗಿ ಮಾತನಾಡಿದ್ದೇನೆ, ಅದಕ್ಕೆ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಲಾಭನೂ ಇಲ್ಲ.. ನಷ್ಟನೂ ಇಲ್ಲ

ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೀನಿ. ಇದರಿಂದ ನನಗೆ ವೈಯಕ್ತಿಕವಾಗಿ ಯಾವುದೇ ಲಾಭನೂ ಇಲ್ಲ.. ನಷ್ಟನೂ ಇಲ್ಲ.. ನಾನೊಬ್ಬ ಸಾಮಾನ್ಯ ಕಾರ್ಯಕರ್ತರ ಅಪೇಕ್ಷೆಯಂತೆ, ಇರುವುದನ್ನು ಇದ್ದಂತೆ ನೇರವಾಗಿ ಹೇಳಿದ್ದೀನಿ ಅಷ್ಟೇ ಎಂದು ರೇಣುಕಾಚಾರ್ಯ ಹೇಳಿದರು.

Exit mobile version