Site icon PowerTV

ಕುಮಾರಣ್ಣ ಹುಷಾರಾಗಿ ಇದ್ದಾರೆ : ಸಾ.ರಾ ಮಹೇಶ್

ಬೆಂಗಳೂರು : ಕುಮಾರಣ್ಣ ಅವರು ಹುಷಾರಾಗಿ ಇದ್ದಾರೆ. ಜನರು, ಅಭಿಮಾನಿಗಳು, ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಹೇಳಿದರು.

ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಡಾಕ್ಟರ್ ಸ್ಪಷ್ಟವಾಗಿ ಹೇಳಿದ್ದಾರೆ, ಯಾವುದೇ ತೊಂದರೆ ಇಲ್ಲ ಅಂತ. ರೆಸ್ಟ್ ನಲ್ಲಿದ್ದಾರೆ, ನಾವು ಯಾರು ನೋಡೋಕೆ ಬರದೆ ಡಾಕ್ಟರ್ ಗಳಿಗೆ ಸಹಕಾರ ನೀಡಿದ್ರೆ, ಬೇಗ ರಿಕವರಿ ಆಗ್ತಾರೆ ಎಂದರು.

ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ದೇವರ ಧಯೆ, ಜನರ ಆಶೀರ್ವಾದದಿಂದ ಚೆನ್ನಾಗಿ ಇದ್ದಾರೆ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಾ.ರಾ.ಮಹೇಶ್ ತಿಳಿಸಿದರು.

ಐಸಿಯುನಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ವೈದ್ಯರು ಶಿಫ್ಟ್ ಮಾಡಿ, ಹೆಚ್​ಡಿಕೆ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಇದೇ ವೇಳೆ ಪಟ್ಟ ನಾಯಕಹಳ್ಳಿ ಶ್ರೀ ನಂಜಾವಧೂತ ಸ್ವಾಮೀಜಿ ಹಾಗೂ ಎಂಎಲ್​ಸಿ ಸೂರಜ್ ರೇವಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಹೆಚ್.ಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿದ್ದಾರೆ ಎಂದರು.

ಹೆಚ್​ಡಿಕೆ ಚೇತರಿಕೆಗೆ ಪೂಜೆ

ಯಲಹಂಕದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಪಕ್ಷದ ಮುಖಂಡ  ಪ್ರವೀಣ್ ಕುಮಾರ್ ಮುಂತಾದವರು ಇದ್ದರು.

Exit mobile version