Site icon PowerTV

ಕೇಂದ್ರ ಸಚಿವರ ನಿವಾಸದಲ್ಲಿ ಯುವಕನ ಗುಂಡಿಕ್ಕಿ ಹತ್ಯೆ!

ಲಕ್ನೋ :  ಕೇಂದ್ರ ಸಚಿವ  ಕೌಶಲ್ ಕಿಶೋರ್​ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.

ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಲಕ್ನೋದಲ್ಲಿ ಕೇಂದ್ರ ಸಚಿವ ಕೌಶಲ್ ಕಿಶೋರ್ ನಿವಾಸದಲ್ಲೇ ಈ ಘಟನೆ ನಡೆದಿದ್ದು ಸ್ಥಳದಲ್ಲಿ ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ಕೂಡ ಪತ್ತೆಯಾಗಿರುವುದು ಭಾರಿ ಅನುಮಾನಕ್ಕೆ ಎಡೆಮಾಡಿದೆ.

ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಸಚಿವರ ನಿವಾಸವನ್ನು ಶೋಧ ನಡೆಸಿದ್ದು ಬಲಿಯಾದ ಯುವಕ ವಿಕಾಸ್ ಶ್ರೀವಾಸ್ತವ ಎನ್ನಲಾಗಿದ್ದು, ಈತ ಕೌಶಲ್ ಕಿಶೋರ್ ಅವರ ಮಗನ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Exit mobile version