Site icon PowerTV

ಕಾವೇರಿ ಹೋರಾಟಕ್ಕೆ ನನ್ನ ಬೆಂಬಲವಿದೆ : ಸುಮಲತಾ ಅಂಬರೀಶ್

ಮಂಡ್ಯ : ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಮಿಳು ನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕುರಿತು ರೈತ ಸಂಘಟನೆಗಳು, ರೈತಪರ ಅನೇಕ ಹೋರಾಟಗಾರರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ನನ್ನದೂ ಕೂಡ ಬೆಂಬಲವಿದೆ ಎಂದು ಹೇಳಿದ್ದಾರೆ.

ನಮ್ಮ ನೀರು, ನಮ್ಮ ಹಕ್ಕು. ನಾಡಿನ ರೈತರೇ ನೀರಿನ ಕೊರತೆಯನ್ನು ಅನುಭವಿಸುತ್ತಿದ್ದರೂ, ನಮ್ಮ ರೈತರಿಗೆ ಅನ್ಯಾಯ ಮಾಡಿ, ಮತ್ತೊಬ್ಬರಿಗೆ ನೀರು ಕೊಡುವುದು ಸರಿಯಾದ ಕ್ರಮವಲ್ಲ. ಕೂಡಲೇ ಅದನ್ನು ನಿಲ್ಲಿಸಿ, ನಾಡಿನ ರೈತರ ಪರ ನಿಲ್ಲಬೇಕಿದೆ ಎಂದು ತಿಳಿಸಿದ್ದಾರೆ.

ರೈತರ ಮುಖದಲ್ಲಿ ಮಂದಹಾಸ ಮೂಡಿಸಿ

ರೈತರ ಗದ್ದೆಗಳ ಜೊತೆಗೆ ಕುಡಿಯುವ ನೀರಿಗೂ ತೊಂದರೆ ಆಗುತ್ತಿದೆ. ಅತ್ಯಂತ ಗಂಭೀರವಾಗಿರುವ ಈ ಸಮಸ್ಯೆಯನ್ನು ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಬಗೆಹರಿಸಿ, ನಮ್ಮ ನಾಡಿನ ರೈತರ ಮುಖದಲ್ಲಿ ಮಂದಹಾಸ ಮೂಡಿಸಬೇಕಿದೆ ಎಂದು ಒತ್ತಾಯ ಮಾಡಿದ್ದಾರೆ.

Exit mobile version