Site icon PowerTV

ಮಗ ಅನರ್ಹ : HDK ಭೇಟಿ ಬಳಿಕ ರೇವಣ್ಣ ಹೇಳಿದ್ದೇನು?

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅನರ್ಹ ವಿಚಾರವಾಗಿ ತಂದೆ ಹಾಗೂ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾನೂನಿಗೆ ಎಲ್ಲರೂ ತಲೆ ಬಾಗಬೇಕು. ನಾವು ತಲೆ ಬಾಗುತ್ತೇವೆ. ಜಡ್ಜ್‌ಮೆಂಟ್ ಕಾಪಿ ಸಿಕ್ಕಿಲ್ಲ. ನ್ಯಾಯಾಲಯಕ್ಕೆ ತಲೆ ಬಾಗ್ತೀನಿ. ಕಾನೂನಿಗೆ ಗೌರವ ಕೊಡಬೇಕು ಎಂದು ಹೇಳಿದ್ದಾರೆ.

ಎ ಮಂಜುನಾಥ್ ಸ್ವಾಗತ ಕೋರಿರೋ ವಿಚಾರವಾಗಿ ಮಾತನಾಡಿದ ಅವರು, ಯಾರು? ಯಾಕೆ ಮಾಡಿದ್ರು? ಅಂತ ಗೊತ್ತಿಲ್ಲ. ನನಗೆ ವಿಷಯಾನೇ ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ಅವರ ಅಡ್ವೊಕೇಟ್ ಇದಾರೆ. ವಿಷಯ ತಿಳಿದುಕೊಂಡಿದ್ದಾರೆ. ಮೇಲ್ಮನವಿ ಸಲ್ಲಿಸುವ ಬಗ್ಗೆ ಅವರು ಯೋಚನೆ ಮಾಡ್ತಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರೇವಣ್ಣ ಅವರು ಸಹೋದರ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಹೆಚ್​.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿರುವ ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Exit mobile version