Site icon PowerTV

ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ನಿವೃತ್ತ ನೌಕರರಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹ

ಬೆಂಗಳೂರು : ನಿವೃತ್ತ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಿಬ್ಬಂದಿಯ ಪತಿ ಅಥವಾ ಪತ್ನಿಗೆ ಉಚಿತ ಬಸ್​ ಪಾಸ್​ ಕಲ್ಪಿಸುವಂತೆ ನೌಕರರ ಸಂಘಟನೆಯಿಂದ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಹಲವು ವರ್ಷಗಳು ಕೆಎಸ್​ಆರ್​ಟಿಸಿ ಹಾಗು ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಸಿಬ್ಬಂದಿಯ ಪತಿ ಅಥವಾ ಪತ್ನಿಗೆ ಉಚಿತ ಬಸ್‌ಪಾಸ್‌ ನೀಡಬೇಕು ಎಂದು ಇಪಿಎಸ್-95, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಸಿದರು.

ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್​ ಸಿಬ್ಬಂದಿಗಳನ್ನು ಅಟ್ಟಾಡಿಸಿ ಹೊಡೆದ ವ್ಯಕ್ತಿ!

ವಿವಿಧ ಪಿಂಚಣಿ ಬೇಡಿಕೆಗೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಘಟನೆಯು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದೆ. ನಿವೃತ್ತರ ಪತಿ ಅಥವಾ ಪತ್ನಿಗೆ ಬಸ್ ಪಾಸ್‌ಗಾಗಿ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಈ ಬೇಡಿಕೆಯೂ ಈಡೇರಿಲ್ಲ ಎಂದು ಸಂಘಟನೆಯ ಅಧ್ಯಕ್ಷ ಶಂಕರ್ ಕುಮಾರ್, ಕಾರ್ಯಾಧ್ಯಕ್ಷ ನಂಜುಂಡೇಗೌಡ ಸಚಿವರ ಗಮನಕ್ಕೆ ತಂದರು.

‘ಈ ಬೇಡಿಕೆ ಗಮನದಲ್ಲಿದ್ದು, ಪ್ರಸ್ತಾವನೆಯನ್ನು ಮಂಡಳಿ ಸಭೆಯಲ್ಲಿಟ್ಟು ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಇದೇ ವೇಳೆ ಸಾರಿಗೆ ಸಚಿವರು ಭರವಸೆ ನೀಡಿದರು.

Exit mobile version