Site icon PowerTV

ಮತ್ತೆ ಆಪರೇಷನ್ ಕಮಲ ಗ್ಯಾರಂಟಿ: ಕೆ.ಎಸ್​ ಈಶ್ವರಪ್ಪ

ಶಿವಮೊಗ್ಗ:  ಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿಅಂತಾ ಕಾಂಗ್ರೆಸ್​​​ಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ. ನಮ್ಮ ಸರ್ಕಾರ ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವೇ? ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ತಿರುಗೇಟು ನೀಡಿದರು.

ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್‌ ಯೋಗ್ಯತೆಗೆ ಇಲ್ಲಿಯವರೆಗೂ ಬಿಜೆಪಿಯ ಒಬ್ಬ ಶಾಸಕರನ್ನು ಕರೆದೊಯ್ಯಲು ಆಗಿಲ್ಲ ಎಂದು ಕಿಡಿಕಾರಿದರು.

Exit mobile version