Site icon PowerTV

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜ್ವರದಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದ ವೈದ್ಯರು ತಿಳಿಸಿದ್ದಾರೆ. ಕಳೆದ ಮಾರ್ಚ್​ ತಿಂಗಳಲ್ಲಿಯೂ ಸೋನಿಯಾ ಗಾಂಧಿ ಜ್ವರದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು.

ಇತ್ತೀಚೆಗೆ ಆಗಸ್ಟ್ 31ರಂದು ಮುಂಬೈನಲ್ಲಿ ನಡೆದ ವಿರೋಧ ಪಕ್ಷದ ಭಾರತ (I.N.D.I.A) ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದರು. ಪುತ್ರ ಮತ್ತು ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಸಭೆಗೆ ಆಗಮಿಸಿದ್ದರು.

Exit mobile version