Site icon PowerTV

ಕಾಡಿನ ಹುಲಿಯಂತಿದ್ದ ಸಿದ್ದರಾಮಯ್ಯ ಪಂಜರದ ಗಿಣಿಯಾಗಿದ್ದಾರೆ: ವಾಟಾಳ್ ನಾಗರಾಜ್​!

ಮೈಸೂರು : ಸಿಎಂ ಸಿದ್ದರಾಮಯ್ಯ ಈ ಹಿಂದೆ ಕಾಡಿನ ಹುಲಿಯಂತಿದ್ದರು. ಈಗ ಪಂಜರದಲ್ಲಿರುವ ಗಿಣಿಯಂತಾಗಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಇಂದು ಬರ ಘೋಷಣೆ ಬಗ್ಗೆ ತೀರ್ಮಾನ ಸಾಧ್ಯತೆ!

ಮೈಸೂರಿನಲ್ಲಿ ಮಾತನಾಡಿದ ಅವರು, ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಡುತ್ತಿರುವ ನೀರನ್ನ ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಾರೆ. ರೈತರು, ಕನ್ನಡಪರ ಹೋರಾಟಗಾರರನ್ನ ಬಂಧಿಸಿದರೂ ಜಗ್ಗಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕನ್ನಡ ಚಳುವಳಿ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್, ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Exit mobile version