Site icon PowerTV

ಸೆ.8ರಂದು ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ : ಅಶ್ವತ್ಥನಾರಾಯಣ

ಬೆಂಗಳೂರು : ಸೆಪ್ಟೆಂಬರ್ 8ರಂದು ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ನಾಯಕ, ಮಾಜಿ ಸಿಎಂ ಡಾ.ಬಿ.ಎಸ್ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಗೆ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬೃಹತ್ ಹೋರಾಟಕ್ಕೆ ಪ್ಲಾನ್ ಮಾಡಿದ್ದೇವೆ. ಪಕ್ಷದ ಎಲ್ಲಾ ವರಿಷ್ಠರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : ತಾಕತ್ ಇದ್ದರೆ ನೀರನ್ನು ಬಂದ್ ಮಾಡಿ : ಡಿಕೆಶಿಗೆ ರೈತರ ಸವಾಲ್

ಪ್ರತಿಭಟನೆ ಉದ್ದೇಶ ಏನು?

ಸರ್ಕಾರ 100 ದಿನ ಪೂರೈಸಿದರೂ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಕಾರಣವಾಗಿದೆ. ಗುತ್ತಿಗೆದಾರರ ಬ್ಲಾಕ್ ಮೇಲ್ ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಿಲ್ಲ. ಪವರ್ ಕಟ್ ಮಾಡುತ್ತಿರುವುದು, ರೈತರ ಆತ್ಮಹತ್ಯೆ ಮಾಡಿಕೊಂಡರು ಪರಿಹಾರ ನೀಡದೆ ಇರುವುದು. ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತ ಕೊಲೆ ಮಾಡುತ್ತಿರುವುದು. ಹಿಗಾಗಿ, ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟು ಜನಪರ ಕೆಲಸ ಮಾಡಲು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

Exit mobile version