Site icon PowerTV

ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ ; ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ದಾವಣಗೆರೆ : ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ ಹಿನ್ನೆಲೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಶಾಲೆಗೆ ಹೋಗುವ ವೇಳೆ 17 ವರ್ಷದ ವಿದ್ಯಾರ್ಥಿನಿಗೆ ಇಬ್ಬರು ಯುವಕರ ಪರಿಚಯವಾಗಿದ್ದರು. ಈಗೇ ಒಂದು ದಿನ ಬೇಕರಿಯ ತಿನಿಸಿನಲ್ಲಿ ಮದ್ದು ಬರುವ ಔಷಧಿ ಹಾಕಿ ವಿದ್ಯಾರ್ಥಿನಿಯ ಆಶ್ಲಿಲ ವಿಡಿಯೋ ಮಾಡಿಕೊಂಡಿದ್ದ ಯುವಕರು. ಅಷ್ಟೇ ಅಲ್ಲದೆ ತಾವು ಕರೆದಾಗ ಬರದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು.

ಇದನ್ನು ಓದಿ : ಕಾವೇರಿಗೆ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಶಿಫ್ಟ್​!​​

ಈ ಕಾರಣದಿಂದ ಮನನೊಂದ ವಿದ್ಯಾರ್ಥಿನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು. ಈ ಘಟನೆಯ ಬಳಿಕ ವಿದ್ಯಾರ್ಥಿನಿಯನ್ನು ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಆರೋಪಿಗಳಿಗೆ ಶಿಕ್ಷೆಯಾಗಲಿ ಎಂಬ ಗಾಯಾಳು ವಿದ್ಯಾರ್ಥಿನಿ ಹೇಳಿಕೆ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Exit mobile version