Site icon PowerTV

ಪತ್ನಿಯನ್ನು ಕೊಂದು ಠಾಣೆಗೆ ಬಂದು ಶರಣಾದ ಪತಿ

ಚಿಕ್ಕಮಗಳೂರು : ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ.

ಶಮಭಾನು (34) ಮೃತಪಟ್ಟ ಪತ್ನಿ. ಶಬ್ಬೀರ್ ಅಹ್ಮದ್ ಎಂಬಾತನೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿ ಪತಿ. ಈತ ದೊಣ್ಣೆಯಿಂದ ಪತ್ನಿಗೆ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ, ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಕಳೆದ ಒಂದು ವರ್ಷದ ಹಿಂದೆ ಮೃತ ಶಮಭಾನು ಅವರನ್ನು ಆರೋಪಿ ಶಬ್ಬೀರ್ ಮದುವೆಯಾಗಿದ್ದನು. ಇಂದು ಕೋಪದ ಕೈಗೆ ಬುದ್ದಿ ಕೊಟ್ಟ ಆರೋಪಿ ಪತ್ನಿಯನ್ನು ಪರಲೋಕಕ್ಕೆ ಕಳುಹಿಸಿದ್ದಾನೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿ ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಲಿದೆ.

Exit mobile version