Site icon PowerTV

ರಾಜ್ಯಾದ್ಯಂತ ಒಂದು ವಾರ ಮಳೆ ಸಾಧ್ಯತೆ !

ಬೆಂಗಳೂರು : ರಾಜ್ಯದ ಹಲವೆಡೆ ಮಂಗಳವಾರ ಉತ್ತಮ  ಮಳೆಯಾಗಿದೆ. ಇನ್ನೂ 1 ವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು  ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶ್ರೀ ಕೃಷ್ಣಜನ್ಮಾಷ್ಟಮಿ : ಇಸ್ಕಾನ್​ ಟೆಂಪಲ್​ ಸಂಚಾರ ಮಾರ್ಗ ಬದಲಾವಣೆ!

ಒಂದು ವಾರ ಕರಾವಳಿ ಜಿಲ್ಲೆಗಳಿಗೆ ಮತ್ತು ಒಳನಾಡಿಗೆ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೀದರ್‌, ಕೊಪ್ಪಳ, ಕಲಬುರಗಿ, ರಾಯಚೂರು ಜಿಲ್ಲೆಯಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Exit mobile version