Site icon PowerTV

ಸನಾತನಧರ್ಮ ಹೇಳಿಕೆ: ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ದ ಯುಪಿಯಲ್ಲಿ ಎಫ್​ಐಆರ್!

ಲಕ್ನೋ: ಸನಾತನಧರ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ.

ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ವಿರುದ್ದದ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಸಚಿವ ಪ್ರಿಯಾಂಕ್‌ ಖರ್ಗೆ ಜೊತೆ ಉದಯನಿಧಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

Exit mobile version