Site icon PowerTV

ಕಾಂಗ್ರೆಸ್ ಪಕ್ಷದಿಂದ ನನಗೆ ಆಹ್ವಾನ ಇದೆ : ಪೂರ್ಣಿಮಾ

ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ನನಗೆ ಆಹ್ವಾನ ಇದೆ. ಆದರೆ, ಭಾರತೀಯ ಜನತಾ ಪಾರ್ಟಿ ಬಿಡುವ ಯೋಚನೆ ಮಾಡಿಲ್ಲ ಎಂದು ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೂ ಮುಂಚಿತವಾಗಿ ಈ ಬಗ್ಗೆ ಚರ್ಚೆ ಇತ್ತು. ಆದರೆ, ಪಕ್ಷ ತೊರೆಯುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರೆ ಎಲ್ಲರಿಗೂ ಹೇಳಿಯೇ ಹೋಗ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಹಿರಿಯ ನಾಯಕ ಬಿಎಸ್​​ ಯಡಿಯೂರಪ್ಪ ಕೊಟ್ಟ ಅನುದಾನದಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಆದರೂ ನಾನು ಹಿರಿಯೂರು ಕ್ಷೇತ್ರದಲ್ಲಿ ಸೋಲನುಭವಿಸಬೇಕಾಯಿತು ಎಂದು ಹೇಳಿದ್ದಾರೆ.

ಯಾವುದೇ ಆಪರೇಷನ್ ಮಾಡ್ತಿಲ್ಲ

ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಬೆನ್ನಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಪೂರ್ಣಿಮಾ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಯಾವುದೇ ಆಪರೇಷನ್ ಮಾಡ್ತಿಲ್ಲ ಎಂದು ತಿಳಿಸಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಠಮಿಯಂದು ಭೇಟಿಯಾಗಿದ್ದೇನೆ ಅಷ್ಟೇ. ನಮ್ಮದು ಆಪರೇಷನ್ ಪಕ್ಷ ಅಲ್ಲ ಕೋ-ಆಪರೇಷನ್ ಪಕ್ಷ. ಪೂರ್ಣಿಮಾ ತಂದೆ ಕೃಷ್ಣಪ್ಪ ನಮ್ಮ ಪಕ್ಷದ  ಲೀಡರ್, ಆದ್ದರಿಂದ ಭೇಟಿಯಾಗಿದ್ದೆ ಅಷ್ಟೇ. ಪೂರ್ಣಿಮಾ ಜೊತೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದು ವದಂತಿಗಳಿಗೆ ತೆರೆ ಎಳೆದಿದ್ದಾರೆ.

Exit mobile version