Site icon PowerTV

ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್‌ ನೀಡಿದೆ. ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್‌, ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ‌ ರಾಜೀನಾಮೆಗೆ ಒತ್ತಾಯಿಸಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದನ್ನ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ‌ಪ್ರಶ್ನೆ ಮಾಡಿದ್ದರು. ಸದ್ಯ ಹೈಕೋರ್ಟ್‌ನಿಂದ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಂತರ ತಡೆ ಸಿಕ್ಕಿದೆ.

Exit mobile version