Site icon PowerTV

BJP-JDS ಮೈತ್ರಿ ನಾಯಿಗೆ ಹೋಲಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಾಯಿಗೆ ಹೋಲಿಸಿ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿ(BJP) ಹಾಗೂ ಜೆಡಿಎಸ್(JDS) ಮೈತ್ರಿ, ಎರಡೂ ಪಕ್ಷದವರಿಗೂ ಅನ್ನ ಹಳಸಿತ್ತು, ನಾಯಿ ಹಸಿದಿತ್ತು ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ದಿಕ್ಕಿಲ್ಲದ ದೋಣಿ ಹಾಗೂ ಜೆಡಿಎಸ್ ಹಳಿಯಿಲ್ಲದ ರೈಲಿನಂತಾಗಿದೆ. ಇಂತಹ ಅಸಹಾಯಕ ಪರಿಸ್ಥಿತಿಯಲ್ಲಿರುವ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ರಾಜಕೀಯ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿವೆ ಎಂದು ಕುಟುಕಿದ್ದಾರೆ.

ಜೆಡಿಎಸ್​ಗೆ ಯಾವ ಸಿದ್ಧಾಂತವಿದೆ?

ಕೋಮುವಾದಿ ಬಿಜೆಪಿಯೊಂದಿಗೆ ಜಾತ್ಯಾತೀತ ಲೇಬಲ್ ಅಂಟಿಸಿಕೊಂಡಿರುವ ಜೆಡಿಎಸ್ ಮೈತ್ರಿಗೆ ಮುಂದಾಗಿದೆ. ಜಾತ್ಯಾತೀತ ತತ್ವ ಎಂಬುದು ಜೆಡಿಎಸ್ ಪಕ್ಷದ ಬೂಟಾಟಿಕೆಯಷ್ಟೆ. ಯಾವುದೇ ಸೈದಾಂತಿಕ ಬದ್ಧತೆಯಿಲ್ಲದ ಪಕ್ಷವೆಂದರೆ ಅದು ಜೆಡಿಎಸ್ ಮಾತ್ರ. ತ್ಯಾತೀತ ಸಿದ್ದಾಂತಕ್ಕೆ ತಿಲಾಂಜಲಿ ಇಟ್ಟು ಕೋಮುವಾದಿ ಪಕ್ಷದ ಜೊತೆ ಕೈ ಜೋಡಿಸುತ್ತಿರುವ ಜೆಡಿಎಸ್​ಗೆ ಯಾವ ಸಿದ್ಧಾಂತವಿದೆ? ಎಂದು ದಳಪತಿಗಳಿಗೆ ಪ್ರಶ್ನೆ ಮಾಡಿದ್ದಾರೆ.

Exit mobile version