Monday, August 25, 2025
Google search engine
HomeUncategorizedಬಿಜೆಪಿ-ಜೆಡಿಎಸ್ ಮೈತ್ತಿ ಬಗ್ಗೆ ನನಗೆ ಗೊತ್ತಿಲ್ಲ : ಹೆಚ್.ಡಿ ರೇವಣ್ಣ

ಬಿಜೆಪಿ-ಜೆಡಿಎಸ್ ಮೈತ್ತಿ ಬಗ್ಗೆ ನನಗೆ ಗೊತ್ತಿಲ್ಲ : ಹೆಚ್.ಡಿ ರೇವಣ್ಣ

ಬೆಂಗಳೂರು : ಲೋಕಸಭಾ ಚುನಾವಣೆ ಮೈತ್ತಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲೋಕಸಭಾ ಚುನಾವಣೆ ಮೈತ್ರಿ ದೇವೇಗೌಡರು ಹಾಗೂ ಕುಮಾರಣ್ಣನಿಗೆ ಬಿಟ್ಟ ವಿಚಾರ. ಸೀಟು ಕೊಟ್ರೆ ನಮ್ಮಲ್ಲಿ ಗೆಲ್ತೀವಿ. ಹಾಸನದಲ್ಲಿ ನಮ್ಮ ಪಕ್ಷ ಭದ್ರವಾಗಿದೆ. 60 ವರ್ಷ ದೇವೇಗೌಡರು ರಾಜಕಾರಣದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದರು.

ಜೆಡಿಎಸ್‌ ಜೊತೆ ಮೈತ್ರಿಯಾಗಿದ್ದು ನಾಲ್ಕು ಸ್ಥಾನ ಕೊಡ್ತಿದ್ದೇವೆ ಅಂತ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿ, ಈಗ ಮೊನ್ನೆ ದಿನ ನಮ್ಮ ನಾಯಕರಾದ ದೇವೇಗೌಡರು, ಸಿ.ಎಂ ಇಬ್ರಾಹಿಂ,  ಕುಮಾರಸ್ವಾಮಿ, ಜಿ.ಟಿ ದೇವೇಗೌಡ ಎಲ್ಲರೂ ಸಭೆ ಮಾಡಿದ್ದೇವೆ. ಎಲ್ಲರೂ ಕೂತು ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಸುದ್ದಿ ಓದಿದ್ದೀರಾ? : ಇಬ್ಬರು ಅಸಹಾಯಕರು ಮೈತ್ರಿ ಮಾಡಿಕೊಳ್ತಿದ್ದಾರೆ: ಶೆಟ್ಟರ್ ವ್ಯಂಗ್ಯ​!

ಯಾವುದೇ ತೀರ್ಮಾನ ಮಾಡಿಲ್ಲ

ಇದೇ 10ರಂದು ಅರಮನೆ ಮೈದಾನದಲ್ಲಿ ಸಮಾವೇಶ ಮಾಡ್ತಿದ್ದೇವೆ. ಏನು ಮಾಡಬೇಕು ಅಂತ ಅಲ್ಲಿ ನಿರ್ಧಾರ ಮಾಡ್ತೀವಿ. ಎರಡೂ ರಾಷ್ಟ್ರೀಯ ಪಕ್ಷಗಳನ್ನ ದೂರ ಇಡಬೇಕಾ ಹೇಗೆ ಅಂತ ನಿರ್ಧಾರ ಮಾಡ್ತೀವಿ. ದೇವೇಗೌಡರು, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ ಎಂದರು. ದೇವೇಗೌಡರು ಅಮಿತ್ ಶಾ ಭೇಟಿ ವಿಚಾರವಾಗಿ ಮಾತನಾಡಿ, ಭೇಟಿಯ ವಿಚಾರ ನನಗೆ ಗೊತ್ತಿಲ್ಲ. ಇನ್ನು ಯಾವುದೇ ತೀರ್ಮಾನ ಮಾಡಿಲ್ಲ. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷ ಸಧೃಡ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments