Site icon PowerTV

ಮತ್ತೆ ಸನಾತನ ಧರ್ಮದ ಬಗ್ಗೆ ನಟ ಚೇತನ್ ಹೇಳಿಕೆ

ತುಮಕೂರು : ಸನಾತನ ಧರ್ಮದ ವಿರುದ್ಧ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ನಟ ಚೇತನ್ ಪ್ರತಿಕ್ರಿಯಿಸಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾತನಾಡುವ (ವಾಕ್​ ಸ್ವಾತಂತ್ರ್ಯ) ಹಕ್ಕು ಎಲ್ಲರಿಗೂ ಇದೆ. ಆದರೆ, ಸನಾತನ ಧರ್ಮ ಅನ್ನೋದನ್ನು ಅವರು ಯಾವ ವ್ಯಾಪ್ತಿಯಲ್ಲಿ ಹೇಳಿದ್ದಾರೆ ಅನ್ನೋದನ್ನು ನೋಡಬೇಕು ಎಂದು ಹೇಳಿದರು.

ನಾನು ಸನಾತನ ಧರ್ಮದ ವಿರೋಧಿಯಲ್ಲ. ನಾನು ಸನಾತನ ಧರ್ಮದಲ್ಲಿನ ಅಸಮಾನತೆಯ ವಿರೋಧಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಈ ಮೂರೂ ಧರ್ಮದಲ್ಲೂ ಅಸಮಾನತೆ ಇದೆ. ಕೇಂದ್ರ ಸರ್ಕಾರ ತರಲು ಹೊರಟಿರುವ ‘ಏಕರೂಪ ನಾಗರಿಕ ಸಂಹಿತೆ’ ಕಾನೂನಿಗೆ ನನ್ನ ಸಹಮತ ಇದೆ. ಅದು ಸಮ ಸಮಾಜದ ಸಿವಿಲ್ ಕೋಡ್ ಆಗಿರಬೇಕು. ಕಮ್ಯೂನಿಸ್ಟರು ಈ ಕಾನೂನನ್ನು ವಿರೋಧಿಸಬಹುದು. ಆದರೆ, ಈ ವಿಚಾರದಲ್ಲಿ ನಮ್ಮ ಬೆಂಬಲ ಇದೆ ಎಂದು ತಿಳಿಸಿದರು.

5 ಗ್ಯಾರಂಟಿ ತೇಪೆ ಹಚ್ಚುವ ಕೆಲಸ

ಕಾಂಗ್ರೆಸ್ ನವರು ತಂದಿರುವ ಐದು ಉಚಿತ ಗ್ಯಾರಂಟಿ ತೇಪೆ ಹಚ್ಚುವ ಕೆಲಸ. ಅದನ್ನು ದೇವರಾಜ ಅರಸರ ಆಡಳಿತಕ್ಕೆ ಹೋಲಿಸಬೇಡಿ. ಎಸ್ಸಿ, ಎಸ್ಟಿಗಳ ಅನುದಾನ ಗ್ಯಾರಂಟಿಗೆ ಬಳಸಿಕೊಂಡು ಮೋಸ ಮಾಡಿದ್ದಾರೆ. ಸಿದ್ದರಾಮಯ್ಯ ರೈತರ ಭೂಮಿಯನ್ನು ಮೈನಿಂಗೆ ಕೊಟ್ಟಿದ್ದಾರೆ. ಮೈನಿಂಗ್ ವಿರುದ್ದವೇ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ರು ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Exit mobile version