Site icon PowerTV

ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವು

ಬೆಂಗಳೂರು : ನವ ವಿವಾಹಿತೆ ಮಹಿಳೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೃಷ್ಣವೇಣಿ (26) ಮೃತ ದುರ್ದೈವಿ. ಎಂಬ ಮಹಿಳೆ ಮೂರು ತಿಂಗಳ ಹಿಂದೆಷ್ಟೆ ಕೋಲಾರ ಮೂಲದ ಪೃಥ್ವಿರಾಜ್ (30) ಎಂಬುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನು ಓದಿ : ಕಾಂಗ್ರೆಸ್ ಬಂದಿರೋದೇ ರಾಜ್ಯಕ್ಕೆ ದುರದೃಷ್ಟಕರ : ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಆದರೆ ಇಂದು ನೇಣು ಬಿಗಿದಿರುವ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಈ ಘಟನಾ ಸಂಬಂಧ ಕೃಷ್ಣವೇಣಿ ಕುಟುಂಬಸ್ಥರು, ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಈ ಘಟನೆ ಹಿನ್ನೆಲೆ ಕಾಡುಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version