ಮುಂದಿನ ಐದು ದಿನಗಳ ಕಾಲ ಮಳೆ ಸಾಧ್ಯತೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳುರು : ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ಪಣಂಬೂರು ಹಾಗೂ ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಆ ಭಾಗದಲ್ಲಿ 6 ಸೆಂ. ಮೀನಷ್ಟು ಮಳೆ ಪ್ರಮಾಣ ಜಾಸ್ತಿಯಾಗಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅವರು ಮುನ್ಸೂಚನೆಯನ್ನು ಕೊಟ್ಟಿದ್ದಾರೆ.

ಇದನ್ನು ಓದಿ : ಕಬ್ಬು ತುಂಬಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವು

ಅಷ್ಟೇ ಅಲ್ಲದೆ ಮುಂದಿನ 48 ಗಂಟೆ ಉತ್ತರ ಒಳನಾಡಿನ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,  ಕರಾವಳಿ ಹಾಗೂ ಕೊಡಗು ಭಾಗಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES