ಸೌಜನ್ಯಾ ಪ್ರಕರಣ ಮರು ತನಿಖೆ ಅರ್ಜಿ ವಜಾ!

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ ಹೊಸದಾಗಿ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಸೌಜನ್ಯಾ ಪ್ರಕರಣದ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ ಮರು ತನಿಖೆಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯ ಮಾಡಿದ್ದರು. ಹೀಗಾಗಿ ಬೆಂಗಳೂರಿನ ಶೇಷಾದ್ರಿಪುರದ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ.ನವೀನ್ ಕುಮಾರ್ ಮತ್ತು ಬಲ್ವಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲಾಯಿತು.

ಇದನ್ನೂ ಓದಿ: ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್​!

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ಅರ್ಜಿದಾರರು ಎತ್ತಿರುವ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.

RELATED ARTICLES

Related Articles

TRENDING ARTICLES