Saturday, August 23, 2025
Google search engine
HomeUncategorized'INDIA'ಗೆ ಬೆಚ್ಚಿ ಬಿದ್ದು 'ಭಾರತ್' ಹೆಸರು ಇಡುತ್ತಿದ್ದಾರೆ : ಸಿದ್ದರಾಮಯ್ಯ

‘INDIA’ಗೆ ಬೆಚ್ಚಿ ಬಿದ್ದು ‘ಭಾರತ್’ ಹೆಸರು ಇಡುತ್ತಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ I.N.D.I.A ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು ‘ಭಾರತ್’ ಅಂತ ಹೊಸದಾಗಿ ಹೇಳಲು ಹೊರಟಿದೆ ಎಂದು ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಈಗ ಹೆಸರು ಬದಲಾಯಿಸಲು ಮುಂದಾಗಿದೆ. ‘ನಾವು ಭಾರತ್ ಜೋಡೋ’ ನಡೆಸಿದವರು. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ಕುಟುಕಿದರು.

ಬಹುತ್ವ ಸಂಸ್ಕೃತಿ ನಾಶಪಡಿಸುವ ಹುನ್ನಾರ

ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದರು.

ಸಂವಿಧಾನ ಕಾಂಗ್ರೆಸ್ ಕೈನಲ್ಲಿ ಸುರಕ್ಷಿತ

ಭಾರತದ ಬಹುತ್ವ ಸಂಸ್ಕೃತಿ, ಸಂವಿಧಾನ ಕಾಂಗ್ರೆಸ್ ಕೈಗಳಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೆ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments