Tuesday, August 26, 2025
Google search engine
HomeUncategorizedಜೆ.ಪಿ.ನಡ್ಡಾಗೆ ಲೀಗಲ್ ನೋಟಿಸ್ !

ಜೆ.ಪಿ.ನಡ್ಡಾಗೆ ಲೀಗಲ್ ನೋಟಿಸ್ !

ಬೆಂಗಳೂರು : ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ವಿಳಂಬ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ವಕೀಲ ಎನ್.ಪಿ.ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕನಿಲ್ಲದ್ದರಿಂದ ಹಲವು ನೇಮಕ ವಿಳಂಬವಾಗಿವೆ. ಮಾನವ ಹಕ್ಕುಗಳ ಆಯೋಗ, ಉಪಲೋಕಾಯುಕ್ತ, KPSC ಸೇರಿದಂತೆ ಹಲವು ನೇಮಕಗಳಾಗುತ್ತಿಲ್ಲ. ಕಾನೂನಿನಂತೆ ಕೆಲ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲು ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ, ಮುಖ್ಯ ನ್ಯಾಯಮೂರ್ತಿಗಳ ಸಮಾಲೋಚನೆಯ ಅಗತ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಪಂಚಮಸಾಲಿ ಸಮುದಾಯ ಹೋರಾಟ!

ವಿರೋಧ ಪಕ್ಷದ ನಾಯಕನಿಲ್ಲದ್ದರಿಂದ ಈ ನೇಮಕಗಳು ನಡೆಯುತ್ತಿಲ್ಲ, ಅಲ್ಲದೇ ಸರ್ಕಾರ ಎಡವಿದಾಗ ಎಚ್ಚರಿಸಲು, ಜನರ ಪರವಾಗಿ ಸಮರ್ಥ ದನಿಯಾಗಲು ವಿರೋಧಪಕ್ಷದ ನಾಯಕನ ಅಗತ್ಯವಿದೆ. ಭಾರತದ ಪ್ರಜೆಯಾಗಿ, ಮತದಾರನಾಗಿ ವಿರೋಧಪಕ್ಷದ ನಾಯಕನನ್ನು ನೇಮಿಸುವಂತೆ ಕೋರಿಕೊಳ್ಳುವ ಹಕ್ಕು ನನಗಿದೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ. ಜೆ.ಪಿ.ನಡ್ಡಾ ಮಾತ್ರವಲ್ಲದೇ,‌ ನಳಿನ್ ಕುಮಾರ್ ಕಟೀಲ್, ಸ್ಪೀಕರ್, ರಾಜ್ಯಪಾಲರಿಗೂ ನೋಟಿಸ್​ನ ಪ್ರತಿಯನ್ನು ಕಳುಹಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments