Site icon PowerTV

ಇಂದಿನಿಂದ ಪಂಚಮಸಾಲಿ ಸಮುದಾಯ ಹೋರಾಟ!

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಸಮಾಜದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ OBC ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಇಂದಿನಿಂದ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆರನೇ ಹಂತದ ಹೋರಾಟ ಆರಂಭವಾಗಲಿದೆ.

ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಿ ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಸುವರು. ನಂತರ ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜರ ಸಂಸ್ಕೃತಿ ಭವನದಿಂದ ರ್ಯಾಲಿ ಆರಂಭವಾಗಲಿದೆ. ಹಂತ ಹಂತವಾಗಿ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಪಂಚಮಸಾಲಿ ಮೀಸಲಾತಿ ವಿಚಾರ ಕೋರ್ಟ್‌ನಲ್ಲಿರುವ ಹಿನ್ನೆಲೆಯಲ್ಲಿ ಕಾನೂನಿನ ತೊಡಕು ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸಭೆ ಕರೆದು ಚರ್ಚಿಸಲು ಸ್ವಾಮೀಜಿ ಒತ್ತಾಯಿಸಿದ್ದಾರೆ.

Exit mobile version