Site icon PowerTV

ಯುಗಾದಿ ನಂತರ ಏನಾಗುತ್ತೋ ಕಾದುನೋಡಿ..! : ಕೋಡಿ ಶ್ರೀ ಮತ್ತೊಂದು ಭವಿಷ್ಯ

ಹುಬ್ಬಳ್ಳಿ : ‘ಯುಗಾದಿ ನಂತರ ಏನಾಗುತ್ತೋ‌ ಕಾದು‌ನೋಡಿ.. ಯುಗಾದಿ ವರೆಗೂ ಸಮಯ ಇದೆ.. ಎಲ್ಲವೂ ಕಾದುನೋಡಬೇಕಾಗಿದೆ..’ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ತಿರತೆ ಕಾಡಲಿದೆ. ರಾಷ್ಟ್ರ ರಾಜಕಾರಣ ಹಾಗೂ ರಾಜ್ಯ ರಾಜಕಾರಣದಲ್ಲೂ ಅಸ್ತಿರತೆ ಉಂಟಾಗಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಅದು ಅವರವರ ವಿಚಾರ, ಅದರ ಬಗ್ಗೆ ಹೇಳಲು ಆಗುವುದಿಲ್ಲ. ದೇಶದ ಬಗ್ಗೆ ಈ ಹಿಂದೆಯೂ ಹೇಳಿದ್ದೆ. ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ ಅಂತ. ರಾಜಕೀಯ ವ್ಯವಸ್ಥೆಯಲ್ಲಿಯೂ ‌ಅಸ್ತಿರತೆ ಉಂಟಾಗಲಿದೆ ಎಂದು ಪುನರುಚ್ಚರಿಸಿದ್ದಾರೆ.

ಅಮಾವಾಸ್ಯೆ ಕಳೆದ ಬಳಿಕ..!

ರಾಜ್ಯದಲ್ಲಿ ಬರಗಾಲದ ಛಾಯೆ ವಿಚಾರದ ಬಗ್ಗೆ ಮಾತನಾಡಿ, ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದ್ರೆ, ಮನುಷ್ಯ ಮಾಡಿದ ಪಾಪ‌ಕರ್ಮಗಳು ಮನುಷ್ಯನನ್ನು ಕ್ಷಮಿಸುವುದಿಲ್ಲ. ಮನುಷ್ಯನ‌ ಪಾಪ-ಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಮನುಷ್ಯನ ‌ಕರ್ಮ ಭಾದೆಗಳು ಹೆಚ್ಚಾದಾಗ ಇಂತಹ ಪರಿಸ್ಥಿತಿ ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ. ಶ್ರಾವಣ ಮಾಸದ ಮಧ್ಯಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Exit mobile version