Site icon PowerTV

ಬೆಳ್ಳಂ ಬೆಳಗ್ಗೆ ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸ್​ ದಾಳಿ!

ಶಿವಮೊಗ್ಗ: ಜಿಲ್ಲೆಯಾದ್ಯಂತ ರೌಡಿಗಳ‌ ಮನೆ ಮೇಲೆ ಇಂದು ಬೆಳಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಲಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ಗೌರಿಗಣೇಶ ಹಬ್ಬ ಹಾಗು ಈದ್ ಮಿಲಾದ್ ಬರಲಿದ್ದು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ರೌಡಿಶೀಟರ್​​ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ ನಿಂದ ಎತ್ತುಗಳು ಸಾವು!

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ‌ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ 241 ರೌಡಿಗಳ ಮನೆಗಳ ಮೇಲೆ ದಾಳಿನಡೆಸಿ ಪರಿಶೀಲನೆ ಮಡೆಸಲಾಗಿದೆ. ರೌಡಿಗಳು ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ‌ಮಾದಕ ವಸ್ತು, ಮಾರಕಾಸ್ತ್ರ ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು.

ಈ ವೇಳೆ ಹಬ್ಬದ ಪ್ರಯುಕ್ತ ಯಾವುದೇ ಕಾನೂನು‌ ಬಾಹಿರ ಚಟುವಟಿಕೆಯಲ್ಲಿ, ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಶಾಂತಿ‌ಭಂಗ‌ ಉಂಟು ಮಾಡುವ ಕೃತ್ಯಗಳಲ್ಲಿ ಭಾಗಿಯಾಗದಂತೆ ರೌಡಿಶೀಟರ್​ಗಳಿಗೆ ಎಚ್ಚರಿಕೆ ನೀಡಲಾಯಿತು.

Exit mobile version