Site icon PowerTV

ಕೊಚ್ಚಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಷ!

ಕೊಚ್ಚಿ: ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸಲು ಸಿದ್ದವಾಗಿದ್ದ ಏರ್​ ಇಂಡಿಯಾ ವಿಮಾನವು ತುರ್ತು ಭೂಸ್ಪರ್ಷವಾಗಿರುವ ಘಟನೆ ನಡೆದಿದೆ.

168 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತ ಏರ್ ಏಷ್ಯಾ ವಿಮಾನವು ಇಲ್ಲಿನ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಿಂತಿರುಗಿದೆ.

ಇದನ್ನೂ ಓದಿ: ರ್ಯಾಪಿಡೋ ಚಾಲಕನಿಗೆ ಪ್ರತಿಭಟನಾ ಕಾರರಿಂದ ಹಲ್ಲೆ! 

ವಿಮಾನವು ಕೊಚ್ಚಿಗೆ ಹಿಂತಿರುಗಿದ ನಂತರ, ಹೈಡ್ರಾಲಿಕ್ ವೈಫಲ್ಯದಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯದ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ಕೂಡಲೇ ಮೊದಲಿನಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version