Site icon PowerTV

ಬಿ.ಕೆ. ಹರಿಪ್ರಸಾದ್​ಗೆ ಎಐಸಿಸಿ ಶಿಸ್ತು ಸಮಿತಿಯಿಂದ ನೋಟಿಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಿರುದ್ಧ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ನೋಟಿಸ್‌ ಜಾರಿಗೊಳಿಸಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಈಡಿಗ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ನೋಟಿಸ್ ನೀಡಲಾಗಿದೆ.

AICC ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದ್ದು, 10 ದಿನಗಳೊಳಗೆ ಉತ್ತರಿಸುವಂತೆ ತಾಕೀತು ಮಾಡಲಾಗಿದೆ. ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಖಾಯಂ ಸದಸ್ಯರೂ ಆಗಿರುವ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರು, ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ದೂರನ್ನು ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸ್ವೀಕರಿಸಿದ್ದಾರೆ.

2023ರ ಸೆಪ್ಟೆಂಬರ್ 9 ರಂದು ಬೆಂಗಳೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರನ್ನು ಸಾರ್ವಜನಿಕವಾಗಿ ಟೀಕಿಸಿದ ಮತ್ತು ಬಿಜೆಪಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ವೇದಿಕೆ ಹಂಚಿಕೊಂಡ ಆರೋಪ ಕೂಡ ಕೇಳಿಬಂದಿದೆ.

ಎಐಸಿಸಿ ಶಿಸ್ತು ಸಮಿತಿಯಿಂದ ಬಿ.ಕೆ ಹರಿಪ್ರಸಾದ್ ಅವರಿಗೆ ನೀಡಿರುವ ನೋಟಿಸ್ ಪ್ರತಿ

Exit mobile version