Tuesday, August 26, 2025
Google search engine
HomeUncategorizedಯೋಗೇಶ್​ನಂತೆ ನಾನೂ ಶಾಲೆ ವಂಚಿತನಾಗಿದ್ದೆ : ಕಹಿ ಘಟನೆ ಬಿಚ್ಚಿಟ್ಟ ಸಿದ್ದರಾಮಯ್ಯ

ಯೋಗೇಶ್​ನಂತೆ ನಾನೂ ಶಾಲೆ ವಂಚಿತನಾಗಿದ್ದೆ : ಕಹಿ ಘಟನೆ ಬಿಚ್ಚಿಟ್ಟ ಸಿದ್ದರಾಮಯ್ಯ

ಬೆಂಗಳೂರು : ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲ್ಯದ ಕಹಿ ಘಟನೆ ಮೆಲುಕು ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರು. ಆದ್ದರಿಂದ ನಾನು ಇಂದು ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ಪೋಷಕರು ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿದ್ದರು. ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಲಾಗಿತ್ತು.

ಅವ್ನು ಕಲಿಯುತ್ತಾ, ನಲಿಯುತ್ತಾ ಇದ್ದಾನೆ

ಯೋಗೇಶ್​ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಲಾಗಿದೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಯೋಗೇಶ್​ನ ಭವಿಷ್ಯವೂ ಉಜ್ವಲವಾಗಲಿ

ಮರಳಿ ಶಿಕ್ಷಣದತ್ತ ಮುಖಮಾಡಿರುವ ಯೋಗೇಶ್​ನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments