Site icon PowerTV

ಪ್ರಯಾಣಿಕರಿಗೆ ಸಿಹಿ ಸುದ್ದಿ: ಗೌರಿ ಗಣೇಶ ಹಬ್ಬಕ್ಕೆ 1,200 ಹೆಚ್ಚುವರಿ ಬಸ್!

ಗೌರಿ ಗಣೇಶ ಹಾಗೂ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 1200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ವಾರಾಂತ್ಯ ದಿನಗಳಾದ ಸೆಪ್ಟೆಂಬರ್ 15, 16 ಮತ್ತು ಗೌರಿ ಗಣೇಶ ಹಬ್ಬದ ಪ್ರಯುಕ್ತ 18ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ರಾಜ್ಯದ ಹಲವು ಸ್ಥಳಗಳಿಗೆ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ಇದನ್ನೂ ಓದಿ: ಸನಾತನ ಧರ್ಮ ವಿವಾದ : ಉದಯನಿಧಿ ಸ್ಟಾಲಿನ್​ಗೆ ಕೋಡಿಶ್ರೀ ನೀತಿಪಾಠ

ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್​ 18ರಂದು ಹೆಚ್ಚುವರಿ ಬಸ್​ಗಳನ್ನು ಹೊರಡಿಸಲಾಗುವುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

Exit mobile version