Site icon PowerTV

BHA vs SL ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಬೆಂಗಳೂರು : ಶ್ರೀಲಂಕಾ ವಿರುದ್ಧದ ಏಷ್ಯಾಕಪ್ ಸೂಪರ್-4 ಪಂದ್ಯದಲ್ಲಿ ಟಾಸ್​ ಗೆದ್ದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಕೊಲಂಬೊದ ಆರ್​. ಪ್ರೇಮದಾಸ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಇದು ಏಷ್ಯಾಕಪ್​ನ ಸೂಪರ್-4 ಹಂತದ 4ನೇ ಪಂದ್ಯವಾಗಿದ್ದು, ಇಂದು ಭಾರತ ಗೆದ್ದರೆ ಫೈನಲ್​ಗೆ ಲಗ್ಗೆ ಇಡಲಿದೆ.

ಇಂದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಶಾರ್ದೂಲ್ ಠಾಕೂರ್​ ಬದಲಿಗೆ ಮತ್ತೊಬ್ಬ ಆಲ್​ರೌಂಡರ್ ಅಕ್ಷರ್ ಪಟೇಲ್ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್

ಶ್ರೀಲಂಕಾ ತಂಡ

ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ಉಪನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದುನಿತ್ ವೆಲ್ಲಲಗೆ, ಮಹೀಶ್ ತೀಕ್ಷಣ, ಮಥೀಶ ಪತಿರಾಣ, ಕಸುನ್ ರಜಿತ

Exit mobile version