Site icon PowerTV

ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿಲ್ಲ : ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಹೆಣ ಇಟ್ಟುಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಇಲ್ಲ. ಬಿಜೆಪಿ ಯಾವಾಗಲೂ ಜೀವ ಉಳಿಸಿಕೊಳ್ಳುವ ಕೆಲಸ ಮಾಡುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಿಎಂ ಸಿದ್ದರಾಮಯ್ಯರ ಹೆಣದ ಹೇಳಿಕೆಗೆ ತಿರುಗೇಟು ನೀಡಿದರು.

ಬಿಜೆಪಿ-ಜೆಡಿಎಸ್ ಹೊಂದಾಣಿಕೆ ವಿಚಾರ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಜೆಡಿಎಸ್ ಹೊಂದಾಣಿಕೆ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ನಾಯಕರಿಂದ ನಮಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಮೈತ್ರಿಯಾದರೆ ಅನುಕೂಲ ಆಗುತ್ತದೆ ಎಂದರು.

ಬರಗಾಲದಲ್ಲೂ ಕೂಡ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಜನಪರವಾಗಿದ್ದ ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟಿದ್ದಾರೆ. ಈ ಬಾರಿ ಸರಾಸರಿ ಮಳೆಯೂ ಕಡಿಮೆಯಾಗಿದೆ.ಎಲ್ಲೆಡೆ ಬರಗಾಲ ಬಂದಿದೆ. ಆದರೂ ಸರ್ಕಾರ ಬರಗಾಲ ಘೋಷಣೆ ಮಾಡದೆ ವಿಳಂಬ ಮಾಡ್ತಿದ್ದಾರೆ. ರೈತರನ್ನು ನಿರ್ಲಕ್ಷಿಸಿರುವ ಸರ್ಕಾರ. ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸರ್ಕಾರದ ಸಚಿವರೇ ಹಗುರವಾಗಿ ಮಾತನಾಡ್ತಿದ್ದಾರೆ. ಇದು ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದರು.

Exit mobile version