Site icon PowerTV

ಕೋಟ್ಯಾಂತರ ರೂ. ವಂಚನೆ ಆರೋಪ: ಚೈತ್ರ ಕುಂದಾಪುರ ಪೊಲೀಸ್​ ವಶಕ್ಕೆ!

ಉಡುಪಿ: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಜೊತೆಗೆ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ:ಅಭಿಮಾನಿಯಿಂದ ಚಾಕೋಲೆಟ್ ಬಾಕ್ಸ್‌ ಕೇಳಿದ ಧೋನಿ: ವೀಡಿಯೋ ವೈರಲ್​!

ಈ ದೂರಿನ ಆಧಾರದ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

Exit mobile version