Site icon PowerTV

ಪ್ರತಾಪ್ ಸಿಂಹ ಗೆದ್ದರೆ ನಾನು ಊರು ಬಿಟ್ಟು ಬಿಡುತ್ತೇನೆ : ಲಕ್ಷ್ಮಣ್ ಸವಾಲ್

ಮೈಸೂರು : ‘ಯಾವುದೇ ಕಾರಣಕ್ಕೂ ಪ್ರತಾಪ್ ಸಿಂಹ ಗೆಲ್ಲುವುದಿಲ್ಲ. ಈ ಬಗ್ಗೆ ಸಮೀಕ್ಷೆ ವರದಿಗಳು ಹೇಳಿವೆ. ಪ್ರತಾಪ್ ಸಿಂಹ 100ಕ್ಕೆ 100ರಷ್ಟು ಸೋಲುತ್ತಾರೆ. ಪ್ರತಾಪ್ ಸಿಂಹ ಗೆದ್ದರೆ ನಾನು ಊರು ಬಿಟ್ಟು ಬಿಡುತ್ತೇನೆ’ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸವಾಲ್ ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ. ಇದೇ ಕಾರಣದಿಂದ ಕಂಡ ಕಂಡವರ ಕಾಲು ಹಿಡಿಯುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ’ ಎಂದು ಭವಿಷ್ಯ ನುಡಿದಿದ್ದಾರೆ.

‘ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಪಲ್ಟಿ ಹೊಡೆಯಲಿವೆ. ಎರಡು ಪಕ್ಷಗಳ ಮೈತ್ರಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಬಿಜೆಪಿಯಿಂದ ಜೆಡಿಎಸ್​ಗೆ ಅದೇ ರೀತಿ ಜೆಡಿಎಸ್​ನಿಂದ ಬಿಜೆಪಿಗೂ ಅನುಕೂಲವಾಗುವುದಿಲ್ಲ. ಎರಡು ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಅನುಕೂಲವಾಗಲಿದೆ. ವಿಧಾನಸಭಾ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಕಾಂಗ್ರೆಸ್​ಗೆ ಬೀಳಲಿವೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ  22 ರಿಂದ 25‌ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version