Site icon PowerTV

ಕರ್ನಾಟಕ ಗೆಜೆಟಿಯರ್​ ಇಲಾಖೆಗೆ ರೋಹಿಣಿ ಸಿಂಧೂರಿ ವರ್ಗಾವಣೆ!

ಬೆಂಗಳೂರು: ಯಾವುದೇ ಸ್ಥಾನ ತೋರದೇ ಕಳೆದ ಕೆಲ ತಿಂಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಇದೀಗ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ.

ಇದನ್ನೂ ಓದಿ: ನೌಕರ ಮೃತಪಟ್ಟರೆ ಸೋದರಿಗೆ ಅನುಕಂಪ ನೌಕರಿ ಇಲ್ಲ: ಹೈಕೋರ್ಟ್​

ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ.

Exit mobile version