Site icon PowerTV

ತಿಮ್ಮಪ್ಪನ ದರ್ಶನ ಮುಗಿಸಿ ಮನೆಗೆ ಹೊರಟ ಕುಟುಂಬ ಸೇರಿದ್ದು ಮಸಣಕ್ಕೆ!

ಚಿಕ್ಕೋಡಿ : ಶ್ರೀಶೈಲ ಹಾಗೂ ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬರ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಂದು ಬೆಳಗಿನ ಜಾವ 3.30 ರ ಸುಮಾರಿನಲ್ಲಿ ಕಡಪ-ಚಿತ್ತೂರ ರಾಷ್ಟ್ರೀಯ ಹೆದ್ದಾರಿಯಯಲ್ಲಿ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. 11 ಮಂದಿಗೆ ಗಂಭೀರ ಗಾಯಗಳಾಗಿವೆ.

ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಹಾಗೂ ಚಾಲಕ ಹನುಮಂತ ಜಾಧವ (32) ಮೃತ ದುರ್ದೈವಿಗಳು. ಮೃತರು ಐವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದವರು. ಅಪಘಾತದಲ್ಲಿ ಗಾಯಗೊಂಡ 11 ಮಂದಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಒಂದೇ ಕುಟುಂಬದ ಒಟ್ಟು 16 ಜನ ಕ್ರೂಸರ್ ವಾಹನ ಮಾಡಿಕೊಂಡು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ತಿರುಪತಿ ದರ್ಶನ ಮುಗಿಸಿಕೊಂಡು ರಾತ್ರಿ ವಾಪಸ್ ಆಗುತಿದ್ದಾಗ ಘಟನೆ ನಡೆದಿದೆ.

Exit mobile version