Site icon PowerTV

100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ : ಚಾಲಕ, ಕ್ಲೀನರ್ ಪಾರು

ಚಿಕ್ಕಮಗಳೂರು : ದಟ್ಟ ಮಂಜು ಹಾಗೂ ಮಳೆಯಿಂದ ರಸ್ತೆ ಕಾಣದೆ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿರುವ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿ 100 ಅಡಿ ಪ್ರಪಾತದಲ್ಲಿ ಉತುಳಿ ಮರಕ್ಕೆ ಸಿಕ್ಕಿಕೊಂಡಿದೆ. ಇದರಿಂದ ಇಬ್ಬರ ಜೀವ ಉಳಿದಿದೆ. ಈ ಲಾರಿಯು ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿತ್ತು. ಘಟನೆ ನಡೆದ ಕೂಡಲೇ ಸ್ಥಳೀಯರು ದೌಡಾಯಿಸಿ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Exit mobile version