Site icon PowerTV

ಪಾರ್ಕಿಂಗ್ ಜಾಗದಲ್ಲಿ ಎಣ್ಣೆ ಹೊಡೆಯಬೇಡಿ ಎಂದಿದ್ದಕ್ಕೆ ಹೋಟೆಲ್ ಪೀಠೋಪಕರಣ ಧ್ವಂಸ

ಶಿವಮೊಗ್ಗ : ಪಾರ್ಕಿಂಗ್ ಸ್ಥಳದಲ್ಲಿ ಮದ್ಯ ಸೇವನೆ ಮಾಡಬೇಡಿ ಎಂದಿದ್ದಕ್ಕೆ ಕಿರಿಕ್ ನಡೆದಿದ್ದು, ಹೋಟೆಲ್​ನಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದ ವರದಹಳ್ಳಿ ಬಳಿಯ ಸೌಪಾರ್ಣಿಕ ಹೋಟೆಲ್​ನಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ತಾ.ಪಂ ಮಾಜಿ ಅಧ್ಯಕ್ಷ ಅಶೋಕ್ ಮರಗಿ ಹಾಗೂ ಬೆಂಬಲಿಗರಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಸಾಗರ ತಾಲ್ಲೂಕು ಮಾಜಿ ಉಪಾಧ್ಯಕ್ಷ ಅಶೋಕ್ ಮರಗಿ ಹಾಗೂ ಬೆಂಬಲಿಗರು ಹೋಟೆಲ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ. ಅಲ್ಲದೆ, ಅವರ ಮೇಲೆ ದೌರ್ಜನ್ಯ ನಡೆಸಿ, ಹೋಟೆಲ್ ಪೀಠೋಪಕರಣ ಧ್ವಂಸ ಮಾಡಿ ಲಕ್ಷಾಂತರ ರೂ. ನಷ್ಟ ಮಾಡಿದ್ದಾರೆ.

2 ಲಕ್ಷಕ್ಕೂ ಹೆಚ್ಚು ನಷ್ಟ

ಸುಮಾರು 2 ಲಕ್ಷಕ್ಕೂ ಹೆಚ್ಚಿನ ಮೊತ್ತ ನಷ್ಟವಾಗಿದೆ. ಈ ಸಂಬಂಧ ಸೌಪಾರ್ಣಿಕ ಹೋಟೆಲ್ ಮಾಲೀಕ ವೀರೇಂದ್ರ ಅವರು ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಾಜಿ ತಾ.ಪಂ. ಉಪಾಧ್ಯಕ್ಷ ಸೇರಿ ಒಟ್ಟು ಐವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Exit mobile version