Site icon PowerTV

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ!

ಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಇದನ್ನೂ ಓದಿ: ಕುಕ್ಕರ್​ ಬಾಂಬ್​ ಸ್ಪೋಟ: ಕದ್ರಿ ದೇವಾಲಯವೇ ಅರಾಫತ್ ಅಲಿ ಗುರಿ

ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿ ಸುಮಾರು ಐದು ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿ ಖಚಿತ ಮಾಹಿತಿಯ ಮೇಲೆಗೆ ದಾಳಿ ನಡೆಸಿ, ಬಿಹಾರ ಮೂಲದ ಪಿಂಟು ಯಾದವ್ ಬಿಂಬಾತನನ್ನು ದಸ್ತಗಿರಿ ಮಾಡಿ ಸುಮಾರು ಐದು ಕೆಜಿ ಅಷ್ಟು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಅತ್ತಿಬೆಲೆ ಪೊಲೀಸರು ಗಾಂಜಾ ಮಾರಾಟಗಾರನನ್ನು ಬಂಧಿಸಿ ಗಂಜಾದ ಹಿಂದೆ ಇರುವಂತಹ ಜಾಲವನ್ನು ಹಾಗೂ ಇನ್ನಷ್ಟು ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚನೆ ಮಾಡಿ ಈಗಾಗಲೇ ಆರೋಪಿಗಳ ಬೆನ್ನತ್ತಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version