Site icon PowerTV

ಜಸ್ಟ್ ಮಿಸ್..! ಇಬ್ಬರ ಮೇಲೆ ಎರಗಿದ ಚಿರತೆ, ಪ್ರಾಣಾಪಾಯದಿಂದ ಪಾರು

ದಾವಣಗೆರೆ : ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಅದೃಷ್ಟವಶಾತ್ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಳೆ ಮಳಲಿ ಗ್ರಾಮದ ಮಂಜುನಾಥ್, ಹೊಸ ಮಳಲಿ ಗ್ರಾಮದ ಮಲ್ಲಿಕಾರ್ಜುನ್ ಚಿರತೆ ದಾಳಿಗೊಳಗಾದ ವ್ಯಕ್ತಿಗಳು. ನ್ಯಾಮತಿಯಿಂದ ತಮ್ಮ ಗ್ರಾಮಗಳಿಗೆ ಹೋಗುತ್ತಿದ್ದಾಗ ಚಿರತೆ ದಾಳಿ ಮಾಡಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿರತೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಮಾಜಿ‌ ಸಚಿವ ಎಂ.ಪಿ.ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳನ್ನ ವಿಚಾರಿಸಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮಲ್ಲಿಕಾರ್ಜುನ್ ಹಾಗೂ ಮಂಜುನಾಥ್ ನ್ಯಾಮತಿಯಿಂದ ಸಂಜೆ ಗ್ರಾಮಕ್ಕೆ ತೆರಳುವಾಗ ಚಿರತೆ ದಾಳಿಯಿಂದ ಗಾಯಗೊಂಡಿದ್ದಾರೆ. ಈ ವಿಷಯ ತಿಳಿದು ತಡರಾತ್ರಿ ಬೆಂಗಳೂರಿಂದ ನೇರವಾಗಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಅವರ ಚಿಕಿತ್ಸೆ ನೀಡಿಸಿ, ಚಿರತೆ ದಾಳಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.

Exit mobile version