Site icon PowerTV

ಕಾರು ಭಸ್ಮ.. ನಿವೃತ್ತ ಯೋಧ ಸ್ಥಳದಲ್ಲೇ ಸಾವು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿವೃತ್ತ ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದ್ದು, ಆನೇಕಲ್ ಮೂಲದ ಕಿಶೋರ್ ಬಾಬು(47) ಸಾವನ್ನಪ್ಪಿರುವ ದುರ್ದೈವಿ. ಅಪಘಾತದ ನಂತರ ಕಾರು ಹೊತ್ತಿ ಉರಿದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿದ್ದ ಎಸ್​ಯುವಿ ಮಹೇಂದ್ರ ಕಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ನಂತರ ಹೆದ್ದಾರಿಯಲ್ಲೇ ಕಾರು ಪಲ್ಟಿಯಾಗಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಗಾಯಾಳುಗಳನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಕಾರಿನ‌ ಬೆಂಕಿ ನಂದಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version