Site icon PowerTV

ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್: ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ!

ದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಲಾಗಿದೆ. ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ‌ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ನಿನ್ನೆ ಸಭೆ ನಡೆಸಲಾಯಿತು. ಸಭೆಯಲ್ಲಿ, ಎರಡು ರಾಜ್ಯಗಳನ್ನು ನಿಭಾಯಿಸಲು CWRC ಆದೇಶ ಪಾಲಿಸಬೇಕು. 15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಜಾತಿ ತಾರತಮ್ಯ ಹೆಚ್ಚು: ರಾಜ್ಯಪಾಲ ಆರ್​.ಎನ್​ ರವಿ!

ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, CWRC ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದೆ. ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ಸಂಕಷ್ಟ ಎದುರಾಗಿದೆ.

Exit mobile version