Site icon PowerTV

ತಮಿಳು ನಟ ವಿಜಯ್​ ಆಂಟನಿ ಮಗಳು ಆತ್ಮಹತ್ಯೆ!

ಚನ್ನೈ: ತಮಿಳು ನಟ ವಿಜಯ್​ ಆಂಟೋನಿ ಅವರ ಪುತ್ರಿ ಮೀರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನ ಅಳ್ವಾರ್​ಪೇಟೆಯ ಟಿಡಿಕೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದಿದೆ.

ಇದನ್ನು ಓದಿ : ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಬಂಧನ!​

ಮೀರಾ ಚೆನ್ನೈನ ಚರ್ಚ್ ಪಾರ್ಕ್ ಶಾಲೆಯಲ್ಲಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮೀರಾ ತುಂಬಾ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಸೋಮವಾರ ರಾತ್ರಿ ಅವರು ಎಂದಿನಂತೆ ತನ್ನ ರೂಮ್​ನಲ್ಲಿ ಮಲಗಲು ಹೋಗಿದ್ದರು.

ಬೆಳಗಿನ ಜಾವ 3 ಘಂಟೆ ಸುಮಾರಿಗೆ ಮಗಳ ರೂಮ್​ಗೆ ತೆರಳಿದ ವಿಜಯ್​ ಆಂಟೋನಿ ತಮ್ಮ ಮಗಳು ಫ್ಯಾನಿಗೆ ನೇಣು ಬಿಗಿದುಕೊಂಡಿರುವುದನ್ನು ನೋಡಿದ್ದಾರೆ. ಕೂಡಲೇ ಆಕೆಯನ್ನು ಮೈಲಾಪುರದ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಸ್ಥಳಕ್ಕೆ ತೇನಂಪೇಟೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version