Site icon PowerTV

ಕಾವೇರಿ ಹೋರಾಟಕ್ಕೆ ಧುಮುಕಿದ ಅಭಿಷೇಕ್ ಅಂಬರೀಶ್

ಮಂಡ್ಯ : ಸ್ಯಾಂಡಲ್ ವುಡ್ ನಟ-ನಟಿಯರು ಸಾಮಾಜಿಕ ಜಾಲತಾಣದ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೆ, ನಟ ಅಭಿಷೇಕ್ ಅಂಬರೀಶ್ ನೇರವಾಗಿ ರೈತರ ಹೋರಾಟದಲ್ಲಿ ಪಾಲ್ಗೊಂಡರು.

ಮಂಡ್ಯದಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಯುವಕನಾಗಿದ್ದೀನಿ, ಯಾವುದೇ ರಾಜಕೀಯ ದೃಷ್ಟಿಯಿಂದ ಇಲ್ಲಿ ಬಂದಿಲ್ಲ ಎಂದು ಹೇಳಿದರು.

ನಾನು ಚಿಕ್ಕದ್ದಿನಿಂದಾಗಲೂ ಕಾವೇರಿ ಹೋರಾಟ ನೋಡಿ ಬೆಳೆದವನು. ಅಪ್ಪಾಜಿ, ಅಮ್ಮ ಎಲ್ಲರೂ ಕಾವೇರಿ ಪರ ಹೋರಾಟ ಮಾಡಿದ್ದಾರೆ. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಕೆಲಸವನ್ನು ಅಮ್ಮ ಮಾಡ್ತಾರೆ. ನಮ್ಮ ನೀರು ಬಿಟ್ರೆ ಮುಂದೆ ಕುಡಿಯುವ ನೀರಿಗೂ ತೊಂದರೆ ಆಗುತ್ತೆ. ನಮ್ಮ ನೀರು, ಜನಕ್ಕೆ ನ್ಯಾಯ ಸಿಗಬೇಕು ಎಂದರು.

ಶಾಶ್ವತ ಪರಿಹಾರ ಸಿಗಬೇಕು

ಕನ್ನಡ ಚಿತ್ರರಂಗ ಈ ವಿಚಾರದಲ್ಲಿ ಯಾವಾಗಲೂ ರೈತರ ಪರ ಇದ್ದೇ ಇರುತ್ತೆ. ಶೀಘ್ರದಲ್ಲೇ ಅದಕ್ಕೆ ಒಂದು ವೇದಿಕೆ ಸಿದ್ದವಾಗಲಿದೆ. ನಮ್ಮ ಬಳಿ ನೀರು ಇದ್ರೆ ತಮಿಳುನಾಡಿನವರು ನೀರು ಕೇಳಲಿ. ನಮ್ಮ ಬಳಿಯೇ ನೀರು ಇಲ್ಲದಿದ್ದಾಗ ಅವರಿಗೆ ನೀರು ಕೊಡೋದು ಹೇಗೆ? ಎರಡೂ ರಾಜ್ಯ ಸರ್ಕಾರಗಳು ಕೂತು ಮಾತನಾಡಬೇಕು. ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಬೇಕು ಎಂದು ಅಭಿಷೇಕ್ ಅಂಬರೀಶ್ ತಿಳಿಸಿದರು.

Exit mobile version