Site icon PowerTV

AUS vs IND : ಟಾಸ್ ಗೆದ್ದ ಭಾರತ್ ಬೌಲಿಂಗ್ ಆಯ್ಕೆ, ಋತುರಾಜ್-ಅಶ್ವಿನ್ ಕಂಬ್ಯಾಕ್

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ತಂಡದಲ್ಲಿ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಕಂಬ್ಯಾಕ್​ ಮಾಡಿದ್ದಾರೆ.

ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ವೇಗಿ ಮಿಚೆಲ್ ಸ್ಟಾರ್ಕ್ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಸ್ಟಾರ್ಕ್​ ಸೊಂಟ ನೋವಿನಿಂದ ಬಳಲುತ್ತಿದ್ದಾರೆ. ಮ್ಯಾಕ್ಸ್​ವೆಲ್ ಪಾದದ ಗಾಯದಿಂದ ಬಳಲುತ್ತಿದ್ದಾರೆ. ಮುಂದಿನ ಪಂದ್ಯಗಳಿಗೆ ಅವರು ತಂಡಕ್ಕೆ ಮರಳಲಿದ್ದಾರೆ.

ಭಾರತ ತಂಡ

ಕೆ.ಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ಶುಭ್​ಮನ್ ಗಿಲ್, ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್(ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲಾಬುಶೇನ್, ಕ್ಯಾಮರೋನ್ ಗ್ರೀನ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಆ್ಯಡಮ್ ಝಂಪಾ, ಮ್ಯಾಟ್ ಶಾರ್ಟ್

Exit mobile version