Site icon PowerTV

ಫಿಲ್ಮ್ ಚೇಂಬರ್ ಚುನಾವಣೆ : ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪ ಶ್ರೀನಿವಾಸ್

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಶಿಲ್ಪ ಶ್ರೀನಿವಾಸ್ ಅವರು ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ್ದಾರೆ.

ವಾಣಿಜ್ಯ ಮಂಡಳಿ ಸದಸ್ಯರ ಕುಟುಂಬ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಲಾಗಿದೆ. ಅದಕ್ಕಾಗಿ 10 ಲಕ್ಷ ರೂಪಾಯಿ ಮೀಸಲಿಡಲಾಗಿದೆ. ಇಡೀ ಚಿತ್ರೋದ್ಯಮಕ್ಕೆ ಈ ಟ್ರಸ್ಟ್ ಬೆಳಕಾಗಲಿ. ಯಾರೇ ಅಧ್ಯಕ್ಷರು ಬಂದರು ಮುಂದುವರೆಸಿಕೊಂಡು ಹೋಗಲಿ. ನಾನು ಅಧ್ಯಕ್ಷ ಸ್ಥಾನಕ್ಕೇರಿದರೆ ಮೊದಲು ಇದನ್ನು ಜಾರಿಗೆ ತರುತ್ತೇನೆ ಎಂದು ಹೇಳಿದ್ದಾರೆ.

1976ರಿಂದ ಚಿತ್ರರಂಗದಲ್ಲಿ ಸಕ್ರಿಯನಾಗಿದ್ದೇನೆ. ನಿರ್ಮಾಪಕನಾಗಿ, ವಿತರಕನಾಗಿ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಈ ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿಲ್ಪ ಶ್ರೀನಿವಾಸ್ ತಿಳಿಸಿದ್ದಾರೆ.

600ಕ್ಕೂ ಹೆಚ್ಚು ಸಿನಿಮಾ ವಿತರಣೆ

ಕಳೆದ 40 ವರ್ಷಗಳಿಂದ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ಶಿಲ್ಪಾ ಶ್ರೀನಿವಾಸ್, 600ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್ , ಶಂಕರ್ ನಾಗ್ , ಅಂಬರೀಶ್, ಶಿವಣ್ಣ ಜೊತೆ ಕೆಲಸ ಮಾಡಿದ್ದಾರೆ. ಝೀರೋನಿಂದ  ನಿರ್ಮಾಪಕನಾಗಿ, ವಿತರಕನಾಗಿ, ಹಂಚಿಕೆದಾರನಾಗಿ ಇಲ್ಲಿಯವರೆಗೂ ಚಿತ್ರರಂಗಕ್ಕೆ ಶ್ರಮಿಸಿದ್ದಾರೆ.

ಭಾ.ಮಾ.ಹರೀಶ್ ಬೆಂ’ಬಲ’

ಇದೇ ಸೆ.28ಕ್ಕೆ ಫಿಲ್ಮ್ ಚೇಂಬರ್ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅಧ್ಯಕ್ಷ ಸ್ಥಾನದಲ್ಲಿ ನಿರ್ಮಾಪಕ ಕಂ ವಿತರಕ ಶಿಲ್ಪ ಶ್ರೀನಿವಾಸ್ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಮಂಡಳಿ ಅಧ್ಯಕ್ಷ ಭಾ.ಮಾ.ಹರೀಶ್ ತಂಡ ಸೇರಿದಂತೆ ಹಲವರು ಶಿಲ್ಪಾ ಶ್ರೀನಿವಾಸ್ ಅವರಿಗೆ ಸಾಥ್ ಕೊಟ್ಟಿದ್ದಾರೆ.

Exit mobile version