Site icon PowerTV

ಸಿದ್ದರಾಮಯ್ಯ ಕುಕ್ಕರ್, ಐರನ್ ಬಾಕ್ಸ್ ಹಂಚಿಲ್ಲ : ಉಲ್ಟಾ ಹೊಡೆದ ಯತೀಂದ್ರ

ಮೈಸೂರು : ಸಿದ್ದರಾಮಯ್ಯ ಅವರು ತಮ್ಮ ಗೆಲುವಿಗಾಗಿ ಮಡಿವಾಳ ಸಮುದಾಯಕ್ಕೆ ಕುಕ್ಕರ್ ಹಾಗೂ ಐರನ್ ಬಾಕ್ಸ್ ಹಂಚಿಕೆ ಮಾಡಿದ್ದಾರೆ ಅಂತ ನಾನು ಎಲ್ಲಿಯೂ ಹೇಳಿಲ್ಲ ಎಂದು ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ.  

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಹೇಳಿರುವುದೇ ಒಂದು ಮಾಧ್ಯಮಗಳು ತೋರಿಸುತ್ತಿರುವುದೇ ಒಂದು ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಸಿದ್ದರಾಮಯ್ಯ ಚುನಾವಣೆಗೊಸ್ಕರ ಕುಕ್ಕರ್ ಕೊಟ್ಟಿದ್ದಾರೆ ಅಂತ ಎಲ್ಲೂ ಹೇಳಿಲ್ಲ. ಆದರೂ ನಾನು ಮಾತನಾಡುವಾಗ ಸರಿಯಾಗಿ ಮಾತನಾಡದೇ ಇರಬಹುದು. ನನ್ನ ಹೇಳಿಕೆ ಆ ರೀತಿಯ ಅರ್ಥವನ್ನೂ ಕೊಟ್ಟಿರಬಹುದು. ಆದರೆ, ಈ ಘಟನೆ ನಡೆದಿರೋದು ಚುನಾವಣೆ ನೀತಿ ಸಂಹಿತೆಗೂ ಮುಂಚೆ. ಜನವರಿ 26 ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ವಿತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ವಿಡಿಯೋ, ಪೋಟೋಗಳೂ ಇವೆ

ನನ್ನ ತಂದೆ ಸಿದ್ದರಾಮಯ್ಯ ಅವರು ಸ್ವತಃ ಕೈಯಿಂದ ಕೂಡ ಕೊಟ್ಟಿಲ್ಲ. ಇದರ ಬಗ್ಗೆ ನಾನು ಮಾತನಾಡಿದ್ದು. ಆದರೆ, ಮಾಧ್ಯಮಗಳಲ್ಲಿ ಚುನಾವಣೆಗಾಗಿ ಹಂಚಿಕೆ ಮಾಡಲಾಗಿದೆ ಅಂತ ಬರುತ್ತಿದೆ. ಆ ಕಾರ್ಯಕ್ರಮದ ವಿಡಿಯೋ, ಪೋಟೋಗಳೂ ಇವೆ. ನಮ್ಮ ತಂದೆ ಅವರ ಕೈಯಿಂದ ದುಡ್ಡು ಕೊಟ್ಟು ಎಲ್ಲಿಯೂ ಹಂಚಿಲ್ಲ ಎಂದು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದ್ದಾರೆ.

Exit mobile version