Site icon PowerTV

ಬಿಜೆಪಿ ಕಾವೇರಿ ನೀರು ರಕ್ಷಣೆಗೆ ಬದ್ಧವಾಗಿದೆ : ಬೊಮ್ಮಾಯಿ

ಬೆಂಗಳೂರು : ಕಾವೇರಿ ವಿಚಾರದಲ್ಲಿ ಕಾಂಗ್ರೆಸ್​ ಸರ್ಕಾರ ಎಡವಿದೆ. ಇದರ ಪರಿಣಾಮ ಹೊರಗೆ ಬಿದ್ದಿದೆ. ಜನ ಸಂಕಷ್ಟದಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾವೇರಿ ನೀರು ರಕ್ಷಣೆಗೆ ಬದ್ಧವಾಗಿದೆ ಎಂದರು.

ನಮ್ಮ ಬಿಜೆಪಿ ವಕೀಲರು ಪ್ರೊಸಿಡಿಂಗ್ ನೋಡಿದ್ರು. ರಾಜ್ಯ ಸರ್ಕಾರದ ಪರ ವಕೀಲರು ಸರಿಯಾಗಿ ವಾದ ಮಾಡಿಲ್ಲ. ಟ್ರಿಬ್ಯುನಲ್ ನಾರ್ಮ್ಸ್ ಬಗ್ಗೆ ಸರಿಯಾಗಿ ಹೇಳಿಲ್ಲ. ತಮಿಳುನಾಡಿನಲ್ಲಿ ಎಷ್ಟು ನೀರು ಬಳಕೆಯಾಗಿದೆ ಅದನ್ನು ಹೇಳಿಲ್ಲ ಎಂದು ಹೇಳಿದರು.

ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕಿದೆ. ಅದನ್ನು ನಾವು ಮಾಡ್ತಿದ್ದೇವೆ‌. ಈಗಾಗಲೇ ಮಂಡ್ಯ, ಚಾಮರಾಜನಗರ, ಬೆಂಗಳೂರಿನಲ್ಲಿ ಎಲ್ಲೆಡೆ ಹೋರಾಟ ಮಾಡಲು ನಿರ್ಧಾರ ಮಾಡಿದ್ದೇವೆ. ಸಭೆಯಲ್ಲಿ ಹೋರಾಟದ ರೂಪು ರೇಷೆಗಳನ್ನು ನಿರ್ಧಾರ ಮಾಡಲಿದ್ದೇವೆ ಎಂದು ತಿಳಿಸಿದರು.

Exit mobile version