Site icon PowerTV

ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ : ಡಾ. ಮಹೇಶ್ ಜೋಶಿ

ಮಂಡ್ಯ : ಬರಿದಾಗಿರುವ ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ. ಮಾರಣಾಂತಿಕ ತೀರ್ಪು ಕೊಟ್ಟಿದ್ದಾರೆ ಎಂದು ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ.

ಮಂಡ್ಯದ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾವೇರಿ ಕೊಳ್ಳದ ಡ್ಯಾಂಗಳು ಬರಿದಾಗುತ್ತಿವೆ. ಮಳೆ ಬರದಿದ್ದರೇ ಬರ ಬರಲಿದೆ. ತಮಿಳುನಾಡಿನಲ್ಲಿ ನಮ್ಮ ರಾಜ್ಯಕ್ಕಿಂತ ಅಂತರ್ಜಲದ ಮಟ್ಟ ಚೆನ್ನಾಗಿ ಇದೆ. ಇಂತಹ ಪರಿಸ್ಥಿತಿಯಲ್ಲಿ ನೀರು ಬಿಡಿ ಎನ್ನುತ್ತಿದ್ದಾರೆ ಎಂದು ಬೇಸರಿಸಿದ್ದಾರೆ.

ಕರ್ನಾಟಕಕ್ಕೆ ಬಂದಿರುವ ದುಸ್ಥಿತಿ ಬೇರೆ ಯಾವ ರಾಜ್ಯಕ್ಕೂ ಇಲ್ಲ. ಸುಪ್ರೀಂಕೋರ್ಟ್​​​ನಲ್ಲಿ ಸಮರ್ಪಕ ವಾದ ಮಂಡನೆ ಆಗಿಲ್ಲ. ಪ್ರಧಾನಮಂತ್ರಿಯನ್ನು ಭೇಟಿ ಮಾಡಿ ಮನವೊಲಿಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬರ ಪ್ರದೇಶಕ್ಕೆ ಹೆಚ್ಚಿನ ಹಣವನ್ನ ವಿನಿಯೋಗ ಮಾಡಲಿ ಎಂದು ತಿಳಿಸಿದ್ದಾರೆ.

ಇನ್ನೂ ಸರಳ ದಸರಾ ಬಗ್ಗೆ ಮಾತನಾಡಿದ ಅವರು, ದಸರಾ, ಹಂಪಿ ಸೇರಿದಂತೆ ಎಲ್ಲಾ ಉತ್ಸವಗಳನ್ನು ರಾಜ್ಯ ಸರ್ಕಾರ ಸರಳವಾಗಿ ಆಚರಿಸಲಿ ಎಂದು ಹೇಳಿದ್ದಾರೆ.

Exit mobile version